ರೈತರ ಹಿತಕ್ಕೆ ರಾಜಕೀಯ ಪಕ್ಷಕ್ಕೆ ಚಿಂತನೆ

ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ
ಹೊಸಪೇಟೆ: ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದಲ್ಲಿ ಕಾಂಗ್ರೇಸ್, ಬಿಜೆಪಿ ಮತ್ತು ಜೆಡಿಎಸ್ ಹೊರತು ಪಡಿಸಿ ರೈತ ಪರ ಪಕ್ಷವನ್ನು ಹುಟ್ಟುಹಾಕಿ ಅಧಿಕಾರಕ್ಕೆ ತರಲು ಚಿಂತನೆ ನಡೆದಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋ಼ಷ್ಠಿಯಲ್ಲಿ ಮಾತನಾಡಿ, ರೈತರಿಗೆ ಡಾ.ಸ್ವಾಮೀನಾಥನ್ ಸಮಿತಿಯ ವರದಿಯಂತೆ ಬೆಂಬಲ ಬೆಲೆ ನಿಗದಿ ಮಾಡುವಂತೆ 26 ವರ್ಷದಿಂದಲೂ ಹೋರಾಟ ನಡೆಯುತ್ತಿದೆ. ಆದರೆ ಯಾವುದೇ ಪಕ್ಷಗಳು ಬೆಲೆ ನಿಗಧಿ ಮಾಡದೇ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಚುನಾವಣೆ ಸಂದರ್ಭದಲ್ಲಿ ರೈತನ ಮಗ ಎಂದು ಭಾಷಣ ಬೀಗುವವರು ಕಡೆಗಣಿಸುತ್ತಲೇ ಬರುತ್ತಿದ್ದಾರೆ. ಆದ್ದರಿಂದ ಮುಂದಿನ ಚುನಾವಣೆಗೆ ರೈತರ ಹಿತ ಕಾಪಾಡುವ ಪರ್ಯಾಯ ಸರ್ಕಾರ ತರಲು ಚಿಂತನೆಗಳು ನಡೆದಿವೆ ಎಂದರು.
ರಾಜ್ಯ ಉಪಾಧ್ಯಕ್ಷರಾದ ಖಾಜ ಹುಸೇನ ನಿಯಾಜಿ, ಹನುಮಂತಪ್ಪ ಹೊಳೆಯಾಚೆ, ಜಿಲ್ಲಾಧ್ಯಕ್ಷ ಟಿ.ನಾಗರಾಜ, ಪ್ರಮುಖರಾದ ಆರ್.ಆರ್.ತಾಯಪ್ಪ, ಸಣ್ಣಕ್ಕಿ ರುದ್ರಪ್ಪ, ಎಂ.ಜಡೆಪ್ಪ, ಅರುಣ್ ಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net