ನಗರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೆರೆದಿರುವ ರಾಗಿ ಖರೀದಿ ಕೇಂದ್ರ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳು ಬಾರದಂತೆ ಪಾರದರ್ಶಕ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ. ನೋಂದಣಿ ಮಾಡಿಸಿರುವ ರೈತರು ಶುದ್ಧವಾದ ರಾಗಿ ನೀಡಿ ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕ ಗೂರಪ್ಪ ಇದ್ದರು.