ಹೊಸಪೇಟೆ ವಿಜಯನಗರ ಕಾಲೇಜಿನ ಎನ್‌ಸಿಸಿ ವಿಭಾಗದ ನಾಲ್ಕು ವಿದ್ಯಾರ್ಥಿಗಳು ಭಾರತೀಯ ಸೇನೆಗೆ ನೇಮಕಾತಿಯಾದ ಹಿನ್ನೆಲೆಯಲ್ಲಿ ಶನಿವಾರ ಗೌರವಿಸಲಾಯಿತು. ಕಾಲೇಜಿನ ಅಧ್ಯಕ್ಷ ಎನ್.ಮಲ್ಲಿಕಾರ್ಜುನ ಮೆಟ್ರಿ, ಪ್ರಾಂಶುಪಾಲ ಮಹಾಂತೇಶ ಆರಾಧ್ಯಠ್, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಂ.ಪ್ರಭುಸ್ವಾಮಿ, ಎನ್‌ಸಿಸಿ ಅಧಿಕಾರಿ ಶಿವಮಲ್ಲಿಕಾರ್ಜುನ್ ಇತರರಿದ್ದರು.
ಹೊಸಪೇಟೆ: ಭಾರತೀಯ ಸೇನೆಗೆ ನೇಮಕಾತಿಯಾದ ಇಲ್ಲಿನ ವಿಜಯನಗರ ಕಾಲೇಜಿನ ಎನ್‌ಸಿಸಿ ವಿಭಾಗದ ನಾಲ್ಕು ವಿದ್ಯಾರ್ಥಿಗಳಿಗೆ ಶನಿವಾರ ಗೌರವಿಸಲಾಯಿತು.
ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳಾದ ಗೌತಮ್, ಪ್ರಜ್ವಲ್, ಪವನ್ ಕುಮಾರ್ ಮತ್ತು ಲೋಕೇಶ್ ಅವರು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಪ್ರಸ್ತುತ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶಿನಾಥ್ ಕೂಡ ಭಾರತೀಯ ಆರ್ಮಿಗೆ ನೇಮಕಗೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ. ಆದ್ದರಿಂದ ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳು ಗೌರವಿಸಿದರು.
ಕಾಲೇಜಿನ ಅಧ್ಯಕ್ಷ ಎನ್.ಮಲ್ಲಿಕಾರ್ಜುನ ಮೆಟ್ರಿ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ದೇಶ ಸೇವೆಗೆ ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ. ಇವರ ಸಾಧನೆ ಉಳಿದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದರು.