ಉಜ್ಜಿನಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿ

ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಉಜ್ಜಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು.
ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಉಜ್ಜಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು.
Published on
ಹೂವಿನಹಡಗಲಿ: ಸೋಗಿ ಗ್ರಾಮದಲ್ಲಿ ಮಂಗಳವಾರ ಉಜ್ಜಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಚಾರ್ಯ ಭಗವತ್ಪಾದರ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು.
ಜಗದ್ಗುರುಗಳ ಪುರ ಪ್ರವೇಶ ವೇಳೆ ಮಹಿಳೆಯರು ಕುಂಭಗಳನ್ನು ಹೊತ್ತು ಸ್ವಾಗತಿಸಿದರು. ಸಮಾಳ, ನಂದಿಕೋಲು ಸೇರಿದಂತೆ ಇತರ ಮಂಗಳ ವಾದ್ಯಗಳು ಅಡ್ಡಪಲ್ಲಕ್ಕಿ ಉತ್ಸವಕ್ಕೆ ಮೆರುಗು ತಂದವು. ದುರ್ಗಾದೇವಿ ದೇವಸ್ಥಾನದವರೆಗೆ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯಿತು. ನಂತರ ವಿವಿಧ ಮಠಗಳ ಮಠಾಧೀಶರ ಸಮ್ಮುಖದಲ್ಲಿ ದುರ್ಗಾದೇವಿ ದೇವಸ್ಥಾನ ಗೋಪುರದ ಕಲಶಾರೋಹಣ ನೆರವೇರಿತು. ನಂತರ ಧರ್ಮ ಸಭೆ ಜರುಗಿತು.
ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ ಸ್ವಾಮೀಜಿ, ಹಂಪಸಾಗರದ ರುದ್ರಮುನಿ ಸ್ವಾಮೀಜಿ, ಹೊನ್ನಳ್ಳಿ ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಸೋಗಿ ಪುರವರ್ಗ ಕಟ್ಟಿಮನಿ ಮಠದ ಅಭಿನವ ಸಿದ್ದವೀರ ಶಿವಾಚಾರ್ಯ ಸ್ವಾಮೀಜಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net