ಕೇಂದ್ರ ಶಿಕ್ಷಣ ಸಚಿವ ರಾಜಿನಾಮೆ ನೀಡಲಿ

ಹೊಸಪೇಟೆ ತಹಸೀಲ್ ಕಚೇರಿ ಮುಂದೆ ಎಐಡಿಎಸ್ ಒ ವಿದ್ಯಾರ್ಥಿ ಸಂಘಟನೆಯಿAದ ಗುರುವಾರ ತೀವ್ರ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ಜೆ.ಪಿ.ರವಿಕಿರಣ್, ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ,ಪ್ರಮುಖರಾದ ಪ್ರಕಾಶ್ ನಾಯಕ್, ಶ್ರೀನಿವಾಸ್, ರಮ್ಯಾ ಇತರರಿದ್ದರು.
ಹೊಸಪೇಟೆ ತಹಸೀಲ್ ಕಚೇರಿ ಮುಂದೆ ಎಐಡಿಎಸ್ ಒ ವಿದ್ಯಾರ್ಥಿ ಸಂಘಟನೆಯಿAದ ಗುರುವಾರ ತೀವ್ರ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ಜೆ.ಪಿ.ರವಿಕಿರಣ್, ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ,ಪ್ರಮುಖರಾದ ಪ್ರಕಾಶ್ ನಾಯಕ್, ಶ್ರೀನಿವಾಸ್, ರಮ್ಯಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸಿಲ್ ಕಚೇರಿ ಮುಂದೆ ಎಐಡಿಎಸ್ ಒ ಸಂಘಟನೆಯಿಂದ ಪ್ರತಿಭಟನೆ
ಹೊಸಪೇಟೆ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಎಐಡಿಎಸ್ ಒ ವಿದ್ಯಾರ್ಥಿ ಸಂಘಟನೆಯಿAದ ನಗರದ ತಾಲೂಕು ಕಚೇರಿ ಮುಂದೆ ಗುರುವಾರ ತೀವ್ರ ಪ್ರತಿಭಟನೆ ನಡೆಯಿತು.
ಸಂಘಟನೆಯ ಜಿಲ್ಲಾಧ್ಯಕ್ಷ ಜೆ.ಪಿ.ರವಿಕಿರಣ್ ಮಾತನಾಡಿ, ಸರ್ಕಾರದ ಬೇಜವಾಬ್ದಾರಿತನದಿಂದಾಗಿ ವೈದ್ಯಕೀಯ ಶಿಕ್ಷಣದ ಕನಸು ಹೊತ್ತ 23 ಲಕ್ಷ ವಿದ್ಯಾರ್ಥಿಗಳು ಜೂ.21ರಂದು ಮತ್ತೊಮ್ಮೆ ಪರೀಕ್ಷೆ ಬರೆಯುವಂತಾಗಿದೆ. ಪರೀಕ್ಷೆಗೂ ಮುನ್ನವೇ ಟೆಲಿಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದರೂ ಎನ್‌ಟಿಎ ನಿರ್ಲಕ್ಷ್ಯ ವಹಿಸಿದೆ. ತನಿಖೆಯ ನೆಪದಲ್ಲಿ ಕಾಲಹರಣ ಮಾಡಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ 9 ದಿನಗಳ ನಂತರ ಪರೀಕ್ಷೆ ರದ್ದುಗೊಳಿಸಿದೆ. ಉನ್ನತ ಭದ್ರತೆಯ ನಡುವೆಯೂ ಸೋರಿಕೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಗರಣದ ವಿರುದ್ಧ ವಿದ್ಯಾರ್ಥಿ ಸಮೂಹ ಎಚ್ಚೆತ್ತುಕೊಳ್ಳಬೇಕು ಎಂದರು.
ಜಿಲ್ಲಾ ಕಾರ್ಯದರ್ಶಿ ಯು. ಉಮಾದೇವಿ ಮಾತನಾಡಿ, ವರ್ಷಗಟ್ಟಲೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹಗಲಿರುಳು ಓದಿದ ವಿದ್ಯಾರ್ಥಿಗಳ ಭವಿಷ್ಯದ ಗತಿಯೇನು? ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಲಾಗುತ್ತಿದೆ. ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಪತ್ರಿಕೆ ಸೋರಿಕೆ ಹಗರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net