ವಿಜಯನಗರ ಜಿಲ್ಲೆಯನ್ನು ಬರಪೀಡಿತ ಘೋಷಿಸಿ

ಹೊಸಪೇಟೆಯಲ್ಲಿ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲಾ ಅಧ್ಯಕ್ಷ ಸಿ.ಎ.ಗಾಳೆಪ್ಪ, ವೆಂಕಟೇಶ, ಮಳಿಗೆ ಮಂಜುನಾಥ, ಪಿ.ರೇಖಾ, ಮಲ್ಲಿಕರ‍್ಜುನ, ರಮೇಶ್, ರೂಪಾ, ಕಲಾವತಿ, ಬಸವರಾಜ್, ಕೆಂಚಪ್ಪ ಇತರರಿದ್ದರು.
ಹೊಸಪೇಟೆಯಲ್ಲಿ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲಾ ಅಧ್ಯಕ್ಷ ಸಿ.ಎ.ಗಾಳೆಪ್ಪ, ವೆಂಕಟೇಶ, ಮಳಿಗೆ ಮಂಜುನಾಥ, ಪಿ.ರೇಖಾ, ಮಲ್ಲಿಕರ‍್ಜುನ, ರಮೇಶ್, ರೂಪಾ, ಕಲಾವತಿ, ಬಸವರಾಜ್, ಕೆಂಚಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗ್ರಹ
ಹೊಸಪೇಟೆ: ವಿಜಯನಗರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಆಗ್ರಹಿಸಿ ರ‍್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಡಾ.ಪುನೀತ್ ರಾಜಕುಮಾರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ನೂರಾರು ರೈತರು ಭಾಗವಹಿಸಿ, ರ‍್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ವಿಜಯನಗರ ಜಿಲ್ಲೆಯ ಆರೂ ತಾಲೂಕುಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸಂಪರ‍್ಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ 30 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕು ಹಾಗೂ ರ‍್ಕಾರಿ ಮತ್ತು ಖಾಸಗಿ ಬ್ಯಾಂಕುಗಳಲ್ಲಿರುವ ರೈತರ ಎಲ್ಲಾ ಸಾಲಗಳನ್ನು ಸಂಪರ‍್ಣವಾಗಿ ಮನ್ನಾ ಮಾಡಬೇಕು ಎಂದು ಈ ಸಂರ‍್ಭದಲ್ಲಿ ಪ್ರತಿಭಟನಾಕಾರರು ರ‍್ಕಾರವನ್ನು ಒತ್ತಾಯಿಸಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ತಾಲೂಕು ಸೇರಿದಂತೆ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು ಮತ್ತು ಹರಪನಹಳ್ಳಿ ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net