ಇನ್ನೇನು ಮುಂಗಾರು ಮಳೆ ಆರಂಭವಾಗುತ್ತಿದ್ದು, ಕಲುಷಿತ ನೀರು, ಹವಾಮಾನ ವೈಪರೀತ್ಯದಿಂದಾಗಿ ಡೆಂಗ್ಯೂ, ಮಲೇರಿಯಾ, ಕಾಲರಾದಂತಹ ಸಾಂಕ್ರಾಮಿಕ ರೋಗಗಳ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರಿಗೆ ಸ್ಥಳೀಯ ಆಡಳಿತ ಸಂಸ್ಥೆ ಸ್ವಚ್ಚ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಬೇಕು. ಒಂದು ವೇಳೆ ಪೈಪ್ಲೈನ್ ದುರಸ್ಥಿ ಇನ್ನಿತರೆ ಕಾರಣಗಳಿಂದ ಕಲುಷಿತ ನೀರು ಸರಬರಾಜಾಗಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾದಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸುವುದಲ್ಲದೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.