ಮಹಿಳಾ ಮತ್ತು ಅಪ್ರಾಪ್ತೆಯರ ಮೇಲಿನ ದೌರ್ಜನ್ಯ ನಿಲ್ಲಲ್ಲಿ

ಹೊಸಪೇಟೆ ತಹಸೀಲ್ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು. ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಶಿವಮ್ಮ, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಪಂಪಾಪತಿ, ಪ್ರಮುಖರಾದ ಪ್ರಕಾಶ್ ನಾಯ್ಕ, ಸಮೀರ್, ಶ್ರೀನಿವಾಸ, ಕಲ್ಮೇಶ, ಹರ್ಷ ಇತರರಿದ್ದರು.
ಹೊಸಪೇಟೆ ತಹಸೀಲ್ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು. ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಶಿವಮ್ಮ, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಪಂಪಾಪತಿ, ಪ್ರಮುಖರಾದ ಪ್ರಕಾಶ್ ನಾಯ್ಕ, ಸಮೀರ್, ಶ್ರೀನಿವಾಸ, ಕಲ್ಮೇಶ, ಹರ್ಷ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ ಕಚೇರಿ ಮುಂದೆ ಎಐಎಂಎಸ್ಎಸ್, ಎಐಡಿವೈಒ ಪ್ರತಿಭಟನೆ
ಹೊಸಪೇಟೆ: ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದ ಯುವತಿ ಲಾವಣ್ಯಳ ಭೀಕರ ಹತ್ಯೆ ಹಾಗೂ ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಅಮಾನವೀಯ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಎಐಎಂಎಸ್ಎಸ್, ಎಐಡಿವೈಒ ಸಂಘಟನೆಯಿAದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಶಿವಮ್ಮ ಮಾತನಾಡಿ, ಬಂಟ್ವಾಳದ ಲಾವಣ್ಯ ಕೊಲೆ ಹಾಗೂ ಪಶ್ಚಿಮ ಬಂಗಾಳ, ರಾಜಸ್ಥಾನಗಳಲ್ಲಿ ಬಾಲಕಿಯರ ಮೇಲಿನ ಕ್ರೂರ ಅತ್ಯಾಚಾರಗಳು ಸಮಾಜ ತಲೆತಗ್ಗಿಸುವಂತಿವೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರಗಳು ಕೂಡಲೇ ಕಾನೂನಾತ್ಮಕ ಕ್ರಮ ಕೈಗೊಂಡು ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಪಂಪಾಪತಿ ಮಾತನಾಡಿ, ಸಿನಿಮಾ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಿಂಸೆ, ಕ್ರೌರ್ಯ ಹಾಗೂ ಅಶ್ಲೀಲತೆಯನ್ನು ವೈಭವೀಕರಿಸಲಾಗುತ್ತಿದ್ದು, ಇದು ಯುವ ಪೀಳಿಗೆಯ ಮನಸ್ಸನ್ನು ವಿಷಮಗೊಳಿಸುತ್ತಿದೆ. ಇಂತಹ ದೃಶ್ಯಾವಳಿಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು. ಮಹಿಳೆಯರ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮ ಕೈಗೊಳ್ಳುವುದರ ಜತೆಗೆ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net