ಹಂಪಿ ಉತ್ಸವದ ಯಶಸ್ಸಿಗೆ ಶ್ರಮಿಸಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಹಂಪಿ ಉತ್ಸವದ ಪರ‍್ವಭಾವಿ ಸಭೆ ನಡೆಯಿತು‌. ಜಿಪಂ ಸಿಇಓ ನೋಗ್ಜಾಯ್ ಮಹಮದ್ ಅಲಿ ಅಕ್ರಂ ಶಾ, ಎಸ್ಪಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಇತರರಿದ್ದರು.
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಹಂಪಿ ಉತ್ಸವದ ಪರ‍್ವಭಾವಿ ಸಭೆ ನಡೆಯಿತು‌. ಜಿಪಂ ಸಿಇಓ ನೋಗ್ಜಾಯ್ ಮಹಮದ್ ಅಲಿ ಅಕ್ರಂ ಶಾ, ಎಸ್ಪಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪರ‍್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪದೋಷವಿಲ್ಲದೆ ನರ‍್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಹಂಪಿ ಉತ್ಸವದ ಪರ‍್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಫೆಬ್ರವರಿ 13 ರಿಂದ 15ರವರೆಗೆ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಸಿದ್ಧತೆಗಳಿಗಾಗಿ ಈಗಾಗಲೇ 21 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಬಾರಿಯ ಉತ್ಸವದಲ್ಲಿ ಒಟ್ಟು ಐದು ವೇದಿಕೆಗಳನ್ನು ನರ‍್ಮಿಸಲಾಗುತ್ತಿದ್ದು, ಚಂದನವನದ ಖ್ಯಾತ ಕಲಾವಿದರಾದ ಡಾಲಿ ಧನಂಜಯ್, ಧ್ರುವ ರ‍್ಜಾ, ರಚಿತಾ ರಾಮ್, ರುಕ್ಮಿಣಿ ವಸಂತ್, ಉಪೇಂದ್ರ ಹಾಗೂ ಗಾಯಕರಾದ ಸಂಜಿತ್ ಹೆಗ್ಡೆ, ಶ್ರೇಯಾ ಘೋಷಾಲ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಇವರೆಲ್ಲರಿಗೂ ಸೂಕ್ತ ವಸತಿ ಮತ್ತು ಶಿಷ್ಟಾಚಾರದಂತೆ ಆತಿಥ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನೆರೆ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುವುದು. ಹಂಪಿಗೆ ಸಂರ‍್ಕ ಕಲ್ಪಿಸುವ ರಸ್ತೆಗಳಲ್ಲಿನ 'ಬ್ಲಾಕ್‌ಸ್ಪಾಟ್'ಗಳನ್ನು ಗುರುತಿಸಿ ಕೂಡಲೇ ದುರಸ್ತಿಪಡಿಸಲು ಮತ್ತು ರಸ್ತೆ ಬದಿಯ ಜಂಗಲ್ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗೆ ನರ‍್ದೇಶನ ನೀಡಲಾಗಿದೆ. ಹಿರಿಯ ನಾಗರಿಕರಿಗಾಗಿ ವಿಶೇಷವಾಗಿ ಪಿಕಪ್ ಮತ್ತು ಡ್ರಾಪ್ ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆ ಮಾಡಲಿದೆ. ಮೂಲಭೂತ ಸೌರ‍್ಯ ಮತ್ತು ಸುರಕ್ಷತೆ, ಜಿಲ್ಲಾ ಪಂಚಾಯಿತಿಯಿಂದ ಸ್ವಚ್ಛತೆ, ಕುಡಿವ ನೀರು ಮತ್ತು ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು‌.
ಜನರ ಆರೋಗ್ಯ ರಕ್ಷಣೆಗಾಗಿ ಉತ್ಸವದ ಸ್ಥಳದಲ್ಲಿ 8 ವೈದ್ಯಕೀಯ ಸ್ಟಾಲ್‌ಗಳು ಹಾಗೂ 108 ಅಂಬುಲೆನ್ಸ್ ಸದಾ ಸಿದ್ಧ ಇರಬೇಕು. ಅರಣ್ಯ ಇಲಾಖೆಯಿಂದ ಕೃತಕ ಮೃಗಾಲಯ ಹಾಗೂ ವಿಜಯನಗರದ ಗತ ವೈಭವ ಸಾರುವ ಸ್ತಬ್ದಚಿತ್ರಗಳು ಜನರ ಕಣ್ಮನ ಸೆಳೆಯಲಿವೆ. ಸಾಹಸ ಕ್ರೀಡೆ, ಗಾಳಿಪಟ ಉತ್ಸವ, ಶಿಲ್ಪಕಲೆ, ರಂಗೋಲಿ ಸ್ರ‍್ಧೆ ಹಾಗೂ ಕವಿಗೋಷ್ಠಿ, ವಿಚಾರಗೋಷ್ಠಿಗಳ ಮೂಲಕ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುವುದು.
ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ರ‍್ಪಡಿಸಲಾಗುವುದು ಎಂದು ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net