ಕೊಟ್ಟೂರು: ಹರಾಳು ಗ್ರಾಮದಲ್ಲಿ ರೈತ ಮಾಳ್ಗಿ ಕರಿಬಸಪ್ಪ ಅವರ ಹೊಲದಲ್ಲಿ 100 ಕೆವಿ ಟ್ರಾನ್ಸ್‌ಫಾರ್ಮರ್ ತಾಂತ್ರಿಕ ಸಮಸ್ಯೆಯಿಂದಾಗಿ ಇತ್ತೀಚಿಗೆ ಸ್ಫೋಟಗೊಂಡಿದೆ.
ಇದರಿಂದಾಗಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅಯ್ಯನಹಳ್ಳಿ ಗ್ರಾಮದ ಸಿದ್ದಲಿಂಗಪ್ಪ ಅಗರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.