ಕಾರ್ಮಿಕರಿಗೆ ಕಾನೂನು ಅರಿವು ಅಗತ್ಯ

ಹೊಸಪೇಟೆ ಟಿಎಂಎಇಎಸ್ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಶುಕ್ರವಾರ ಕಾರ್ಮಿಕ ದಿನ ಆಚರಿಸಲಾಯಿತು. ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಪ್ರಶಾಂತ್ ನಾಗಲಾಪುರ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಗುಜ್ಜಲ್ ನಾಗರಾಜ್, ಕಾರ್ಮಿಕ ನಿರೀಕ್ಷ ಶಿವಶಂಕರ್ ತಳವಾರ್ ಇತರರಿದ್ದರು.
ಹೊಸಪೇಟೆ ಟಿಎಂಎಇಎಸ್ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಶುಕ್ರವಾರ ಕಾರ್ಮಿಕ ದಿನ ಆಚರಿಸಲಾಯಿತು. ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಪ್ರಶಾಂತ್ ನಾಗಲಾಪುರ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಗುಜ್ಜಲ್ ನಾಗರಾಜ್, ಕಾರ್ಮಿಕ ನಿರೀಕ್ಷ ಶಿವಶಂಕರ್ ತಳವಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಸಲಹೆ
ಹೊಸಪೇಟೆ: ಶ್ರಮವಹಿಸಿ ದುಡಿಯುವ ಕಾರ್ಮಿಕರು ತಮ್ಮ ಹಕ್ಕುಗಳ ಜ್ಞಾನ ಹೊಂದಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಟಿಎಂಎಇಎಸ್ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರಿಗೆ ಭದ್ರತೆ, ಸೌಲಭ್ಯ ಇಲ್ಲದ ಕಾಲದಲ್ಲಿ ಸಂಘಟನೆಗಳು ಹೋರಾಟ ನಡೆಸಿ ಕಾರ್ಮಿಕರಿಗೆ ಹಕ್ಕುಗಳು ದೊರೆಯುವಂತೆ ಮಾಡಿದವು. ಅದನ್ನು ನೆನಪಿಸುವುದಕ್ಕೆ ಕಾರ್ಮಿಕರ ದಿನಾಚರಣೆ ಸೂಕ್ತ ವೇದಿಕೆಯಾಗಿದೆ. ಕಾರ್ಮಿಕ ಕಾನೂನುಗಳನ್ನು ರೂಪಿಸಲಾಗಿದೆ. ಪ್ರತಿಯೊಬ್ಬ ಕಾರ್ಮಿಕರು ಕಾನೂನುಗಳ ಕುರಿತು ಅರಿವು ಹೊಂದಿರಬೇಕು ಎಂದರು.
ಸಾಮಾಜಿಕ ನ್ಯಾಯ, ಲಿಂಗಾಧಾರಿತ ಅಸಮಾನತೆ, ಜಾತಿ ತಾರತಮ್ಯ, ನಿರುದ್ಯೋಗ, ಮಾನವ ಹಕ್ಕು, ಬಡತನ ಅನಕ್ಷರತೆ ನಿವಾರಿಸುವ ನಿಟ್ಟಿನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಕಾರ್ಮಿಕ ವರ್ಗವು ಅತಿ ಹೆಚ್ಚು ಶೋಷಣೆಗೆ ಒಳಗಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಕಾರ್ಮಿಕ ಕಾನೂನುಗಳನ್ನು ರೂಪಿಸಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net