ವಿಜಯಪುರ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಸಿಬಿಐ ದಾಳಿ

IMG-20210319-WA0083
Published on

ವಿಜಯಪುರ: ನಗರದ ಹೃದಯ ಭಾಗದಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿಯಿಂದ ಆಗಮಿಸಿದ ಸಿಬಿಐ ಅಧಿಕಾರಿಗಳ ತಂಡ ಸಂಜೆ ಏಕಾಏಕಿ ದಾಳಿ ನಡೆಸಿದ್ದು ದಾಖಲೆ ಪರಿಶೀಲಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯ ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. ಪ್ರತೀ ಗ್ರಾಮ ಪಂಚಾಯಿತಿಗೆ ಕೇಬಲ್ ಅಳವಡಿಸದೇ ಬಿಲ್ ಎತ್ತಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net