ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ, ಡಿಸಿಗೆ ಪ್ರಶಸ್ತಿ ಪ್ರದಾನ

DHWAJA NIDHI
ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್‌ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉಮಾಶಂಕರ ಎಸ್.ಆರ್, ವಿನುತಾ ಜಿ.ಆರ್ ಮತ್ತಿತರರಿದ್ದಾರೆ.
Published on

ವಿಜಯಪುರ: ಧ್ವಜ ನಿಧಿ ಸಂಗ್ರಹದಲ್ಲಿ 2023ನೇ ಸಾಲಿನ ಪ್ರಶಸ್ತಿಗೆ ವಿಜಯಪುರ ಜಿಲ್ಲೆ ಭಾಜನವಾಗಿದ್ದು, ಶನಿವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಸ್ತಿ ಸ್ವೀಕರಿಸಿದರು.

ಬೆಂಗಳೂರಿನ ರಾಜಭವನದಲ್ಲಿ ಶನಿವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಿದರು.

2023ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ಕೀರ್ತಿ ವಿಜಯಪುರಕ್ಕೆ ಸಂದಿದೆ. ಇದಕ್ಕೂ ಮೊದಲು ಅಂದರೆ 2022ನೇ ಸಾಲಿನಲ್ಲಿಯೂ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ದೊರಕಿತ್ತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ ಎಸ್.ಆರ್, ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕಿ ವಿನುತಾ ಜಿ.ಆರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net