

ವಿಜಯಪುರ: ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸುವಂತೆ ವಿಮಾನ ನಿಲ್ದಾಣ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಿ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಒಂದು ವರ್ಷದೊಳಗಾಗಿ ವಿಜಯಪುರ ನಗರಕ್ಕೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಲು ವಿನಂತಿಸಿದರು. ಇದಕ್ಕೆ ಸ್ಪಂದಿಸಿದ ಬಿ.ಬಿ. ಪಾಟೀಲ, ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಜನವರಿ ಮೊದಲ ವಾರದಲ್ಲಿ ಕಾಮಗಾರಿಗಳನ್ನು ಆರಂಭಿಸಿಸಲು ಉದ್ದೇಶಿಸಲಾಗಿದೆ ಎಂದರು.
ಹೋರಾಟ ಸಮಿತಿ ಸದಸ್ಯರಾದ ಡಾ. ಎಲ್.ಎಚ್. ಬಿದರಿ, ರಾಜು ಗಚ್ಚಿನಮಠ, ಭೀಮಸೇನ ಕೋಕರೆ, ಶರಣು ಅವರಾದಿ, ಶರದ್ ರೊಡಗಿ, ಗಂಗಾಧರ ಸಾಲಕ್ಕಿ ಇತರರಿದ್ದರು.