ಎಐಯುಟಿಯುಸಿ ಪ್ರತಿಭಟನೆ

VJP 3-3
Published on

ವಿಜಯಪುರ: ರೈತರ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲಿಸಿ ಎಐಯುಟಿಯುಸಿ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ ಮಾತನಾಡಿ, ಇಡೀ ದೇಶದ ಕೃಷಿ ಸಮುದಾಯ ಮತ್ತು ಜನಸಾಮಾನ್ಯರ ಜೀವನಕ್ಕೆ ಕಂಟಕವಾಗುವ 3 ಕರಾಳ ಕೃಷಿ ಕಾಯ್ದೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಇಂಥ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಸರ್ಕಾರ ದೌರ್ಜನ್ಯ ಎಸಗುತ್ತಿದೆಯಲ್ಲದೆ, ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಸರ್ಕಾರದ ನಡೆಯನ್ನು ಎಐಯುಟಿಯುಸಿ ಖಂಡಿಸುತ್ತದೆ ಎಂದರು.
ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಕಾಸಿಬಾಯಿ ಜಿ.ಟಿ., ಗಿರಿಜಾ ಮಠಪತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net