ಮಾ.31ರೊಳಗೆ ಕೆರೆಗಳಿಗೆ ನೀರು ತುಂಬಿಸಿ

VJP DC
Published on

ವಿಜಯಪುರ: ಜಿಲ್ಲೆಯಲ್ಲಿ ಮಾ.31ರ ವರೆಗೆ ಆಲಮಟ್ಟಿ ಜಲಾಶಯದಿಂದ ಕೆಬಿಜೆಎನ್‌ಎಲ್ ಕಾಲುವೆಗಳಿಗೆ ನೀರು ಹರಿಸುತ್ತಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳನ್ನು ತುಂಬಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕುರಿತು ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆ ಸಮಯದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ಡೋಣಿ ನದಿಯಲ್ಲಿರುವ ಹೂಳು ಮತ್ತು ಗಿಡಗಂಟಿಯನ್ನು ತೆಗೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ಲಕ್ಷ್ಮ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಕೆಬಿಜೆಎನ್‌ಎಲ್ ಆಲಮಟ್ಟಿ ಮತ್ತು ರಾಂಪುರ ವಲಯದ ಅಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು, ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net