ನಂದಿನಿ ಬಳಗದಿಂದ 11 ಲಕ್ಷ ರೂ. ದೇಣಿಗೆ

VMS 18-2
Published on

ವಿಜಯಪುರ: ಮಹಾಮಾರಿ ಕರೊನಾ ಹಾವಳಿ ವಿಶ್ವವನ್ನೇ ತಲ್ಲಣಗೊಳಿಸಿದ್ದು, ದೇಶದಲ್ಲೂ ರುದ್ರನರ್ತನ ನಡೆಸಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ನೆರವಾಗುವ ನಿಟ್ಟಿನಲ್ಲಿ ನಂದಿನಿ ಬಳಗ 11 ಲಕ್ಷ ರೂ. ಆರ್ಥಿಕ ನೆರವು ನೀಡಿದೆ.
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆ ಹಾಲು ಒಕ್ಕೂಟದ ಅಧ್ಯಕ್ಷ ಸಂಬಾಜಿ ಮಿಸಾಳೆ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜೀವ ದಿಕ್ಷೀತ್ ನೇತೃತ್ವದಲ್ಲಿ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ 11 ಲಕ್ಷ ರೂ. ದೇಣಿಗೆ ಸಂಗ್ರಹಿಸಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.
ಈಗಾಗಲೇ ಸಾರ್ವಜನಿಕರಿಗೆ ಜೀವನಾವಶ್ಯಕವಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಜಿಲ್ಲಾಡಳಿತದ ನೆರವಿನೊಂದಿಗೆ ತಡೆಯಿಲ್ಲದೆ ವಿತರಿಸಲಾಗುತ್ತಿದೆ. ಇದಲ್ಲದೆ ಲಾಕ್‌ಡೌನ್ ಸಂದರ್ಭದಲ್ಲಿ ಪ್ರತಿದಿನ 25000 ಲೀಟರ್ ಹಾಲನ್ನು ಅನುಸೂಚಿತ ಕೊಳೆಗೇರಿ, ಅನುಸೂಚಿತವಲ್ಲದ ಕೊಳೆಗೇರಿ, ಕಟ್ಟಡ ಕಾರ್ಮಿಕರ ವಸ್ತಿಗಳು ಮತ್ತು ವಲಸಿಗ ಕಾರ್ಮಿಕರು ಹಾಗೂ ತಾತ್ಕಾಲಿಕ ಪುನರ್ವಸತಿ ಶಿಬಿರಗಳ ನಿವಾಸಿಗಳಿಗೆ ಪೂರೈಸಲು ಸರಬರಾಜು ಮಾಡಲಾಗುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಸಂಬಾಜಿ ಮಿಸಾಳೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net