

ವಿಜಯಪುರ: ಭೀಮಾತೀರದ ರೌಡಿ ಶೀಟರ್ ಮಹಾದೇವ ಸಾಹುಕಾರ ಹಾಗೂ ಆತನ ಸಹಚರರ ಮೇಲಿನ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಶನಿವಾರ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಮುರುಗೇಶ ಸುಭಾಷ ಉಳ್ಳಾಗಡ್ಡಿ(26) ಬಂಧಿತ ಆರೋಪಿ. ಈತನಿಂದ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ನ. 2 ರಂದು ಅರಕೇರಿ ಬಳಿಯ ಕನ್ನಾಳ ಕ್ರಾಸ್ ಬಳಿ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಇಬ್ಬರು ಅಸುನೀಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 30 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಅನುಪಮ್ ಅಗರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.