ಬಿಜೆಪಿಗೆ ಸುರೇಶ ಅಂಗಡಿ ಕೊಡುಗೆ ಅಪಾರ

HN 24-2
Published on

ವಿಜಯಪುರ: ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿ ಸುರೇಶ ಅಂಗಡಿ ಸರಳ ವ್ಯಕ್ತಿತ್ವ ಹೊಂದಿದ್ದರು. ಬಿಜೆಪಿಗೆ ಅವರ ಕೊಡುಗೆ ಅಪಾರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ) ಹೇಳಿದರು.
ನಗರದ ಗ್ಯಾಂಗ್‌ಬಾವಡಿ ಸಮೀಪದ ಹನುಮಾನ ಮಂಗಲ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುರೇಶ ಅಂಗಡಿ ಅವರು ಭಾರತೀಯ ಜನತಾ ಪಕ್ಷದ ಅನೇಕ ಜವಾಬ್ದಾರಿಗಳನ್ನು ಹೊತ್ತುಕೊಂಡಿದ್ದರು. ಅವರೊಬ್ಬ ಉತ್ತಮ ನಾಯಕರಾಗಿದ್ದರು ಎಂದು ಬಣ್ಣಿಸಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಪಕ್ಷದ ಸಿದ್ಧಾಂತಗಳನ್ನು ಅವರು ತುಂಬಾ ಅರಿತಿದ್ದರು. ಎಲ್ಲರೊಂದಿಗೂ ಅನ್ಯೋನ್ಯವಾಗಿ ಇರುತ್ತಿದ್ದರು. ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.

ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮುಖಂಡರಾದ ವಿಜುಗೌಡ ಪಾಟೀಲ, ಮಳುಗೌಡ, ಪ್ರಭುಗೌಡ ದೇಸಾಯಿ, ಮಲ್ಲಿಕಾರ್ಜುನ ಜೋಗುರ, ಶಿವರುದ್ರ ಬಾಗಲಕೋಟ, ವಿವೇಕಾನಂದ ಡಬ್ಬಿ, ಛಾಯಾ ಮಸಿ, ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ಗೋಪಾಲ ಘಟಕಾಂಬಳೆ, ಶಿವಾನಂದ ಅವಟಿ, ಬಸವರಾಜ ಬೈಚಬಾಳ, ಸಂಜು ಪಾಟೀಲ ಕನಮಡಿ, ಗುರಲಿಂಗಪ್ಪ ಅಂಗಡಿ, ಕಾಂತು ಶಿಂಧೆ, ಕೃಷ್ಣಾ ಗುನ್ಹಾಳಕರ, ವಿಜಯ ಜೋಶಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net