ಸ್ವಚ್ಛತೆ ಮೊದಲ ಆದ್ಯತೆ ಆಗಲಿ

hn-28-2
Published on

ವಿಜಯಪುರ: ಸ್ವಚ್ಛತೆ ಪ್ರತಿಯೊಬ್ಬರ ಮೊದಲ ಆದ್ಯತೆ ಆಗಬೇಕು ಆಗ ಮಾತ್ರ ಸ್ವಚ್ಛ ಭಾರತ ಪರಿಕಲ್ಪನೆಗೆ ಅರ್ಥ ಸಿಗಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದರು.

ನಗರದಲ್ಲಿರುವ ಮುಖ್ಯ ಅಂಚೆ ಕಚೇರಿ ಮುಂಭಾಗ ಭಾನುವಾರ ಬಿಜೆಪಿ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಪ್ರಧಾನಿ ಮೋದಿ ಅವರ ಕನಸು ನನಸಾಗಿಸಬೇಕಾದರೆ ನಾವು ನೀವು ಮಾತ್ರವಲ್ಲದೆ, ದೇಶದ ಪ್ರತಿಯೊಬ್ಬರೂ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿದಾಗ ಮಾತ್ರ ವಿಶ್ವದಲ್ಲೇ ಭಾರತ ಮಾದರಿ ದೇಶ ಎನಿಸಿಕೊಳ್ಳಲಿದೆ ಎಂದರು.

ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಸತೀಶ ಪಾಟೀಲ ಮಾತನಾಡಿ, ಸ್ವಚ್ಛ ಭಾರತ ಎಂಬುದು ಗಾಂಧೀಜಿ ಹಾಗೂ ಪ್ರಧಾನಿ ಮೋದಿ ಅವರ ಕನಸು. ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಸಾರ್ವಜನಿಕ ಸ್ಥಳಗಳು ಸ್ವಚ್ಛವಾಗಿರಬೇಕು. ಅದಕ್ಕೆ ಎಲ್ಲರೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ ಎಂದರು.

ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಶಿಂಧೆ, ಯುವ ಮೋರ್ಚಾ ಜಿಲ್ಲಾ ಉಸ್ತುವಾರಿ ರಾಜೇಶ ತಾವಸೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಛಾಯಾ ಮಸೀಯರ, ಲಕ್ಷ್ಮೀ ಕನ್ನೋಳ್ಳಿ, ಸುವರ್ಣ ಕುರ್ಲೆ, ಅನೀಲ ಉಪ್ಪಾರ, ಗಣೇಶ ಹಜೇರಿ, ರಾಜೇಂದ್ರ ವಾಲಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net