ಕಾರ್ಮಿಕರ ಸೇವೆ ಕಾಯಂಗೊಳಿಸಲು ಆಗ್ರಹ

VJP-21-1
Published on


ವಿಜಯಪುರ: ಕಾರ್ಮಿಕರ ಸೇವೆ ಕಾಯಂಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘ (ಸಿಐಟಿಯು) ದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಲಕ್ಷ್ಮಣ ಹಂದ್ರಾಳ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ನಗರ ಪಾಲಿಕೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ, ನೇರ ಪಾವತಿ, ಸಮಾನ ಕೆಲಸಕ್ಕೆ ಸಮಾನ ವೇತನದ ಅಡಿಯಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರ ಲೋಡರ್‌ಗಳು, ವಾಟರ್‌ಮನ್, ಕಸದ ಆಟೋ ಚಾಲಕರು, ಕಂಪ್ಯೂಟರ್ ಆಪರೇಟರ್‌ಗಳು, ಯುಜಿಡಿ ಕಾರ್ಮಿಕರು, ಕಚೇರಿ ಸಹಾಯಕರ ಸೇವೆಯನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಜೀವದ ಹಂಗು ತೊರೆದು ನಾಗರಿಕರಿಗೆ ಸೇವೆ ನೀಡುತ್ತಿರುವ ಈ ಕಾರ್ಮಿಕರ ಬದುಕು ದುಸ್ತರವಾಗಿದೆ. ಕರೊನಾ ಸಂದರ್ಭದಲ್ಲಿ 70ಕ್ಕೂ ಅಧಿಕ ಜನರು ಜೀವ ಕಳೆದುಕೊಂಡಿದ್ದಾರೆ. ಜೀವನ ಭದ್ರತೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ನಂಬಿ ಅವರ ಕುಟುಂಬ ಜೀವನ ಸಾಗಿಸುತ್ತಿದೆ. ಹೀಗಾಗಿ ಇವರಿಗೆ ಸೇವಾ ಭದ್ರತೆ ನೀಡಬೇಕೆಂದರು.

ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಸುರೇಖಾ ರಜಪೂತ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಲಕ್ಷೃ ವಹಿಸದೆ ಜನರ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದರು.

ವಿಜಯಕುಮಾರ ಬೆಳ್ಳುಂಡಗಿ, ದಯಾನಂದ ಅಲಿಯಾಬಾದಿ, ಗುರಪ್ಪ ದಲ್ಲಾಲ, ಸುರೇಶ ಡಂಬಳ, ಸಮೀರ ಶಿರೋಳ, ಮಹ್ಮದ್‌ರಫೀಕ ಲಸ್ಕರಿ, ಮನೋಹರ ಚವ್ಹಾಣ್, ಮನೋಜ ಭೋವಿ, ಪೀರಪ್ಪ ಚಲವಾದಿ, ಸುಂದರಾಬಾಯಿ, ಯಲ್ಲವ್ವ ಹಂಚನಾಳ, ಮೀನಾಕ್ಷಿ ಪರಪ್ಪಗೊಳ, ಭಾರತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net