

ವಿಜಯಪುರ: ನಗರದ ವಿಶ್ವವಿಖ್ಯಾತ ಗೋಲಗುಮ್ಮಟ ಆವರಣದಲ್ಲಿರುವ ಆದಿಲ್‌ಶಾಹಿ ಕಾಲದ ಬಾವಡಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಭಾನುವಾರ ವೀಕ್ಷಿಸಿದರು.
ನಂತರ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಪೌರಕಾರ್ಮಿಕರ ಗೃಹ ನಿರ್ಮಾಣ ಹಂತದ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಪರಿಶೀಲನೆ ಸಂದರ್ಭದಲ್ಲಿ ಈ ಬಡಾವಣೆಗೆ ಬೇಕಾದ ಎಲ್ಲ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕ್ರಮ ಕೈಗೊಂಡು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಲಾನುಭವಿಗಳಿಗೆ ಹಸ್ತಾಂತರಿಸಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಎ.ಎಸ್.ಕೊಲ್ಹಾರ, ಇತರ ಅಧಿಕಾರಿಗಳು ಇದ್ದರು.