

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಕರೊನಾತಂಕ ಮುಂದುವರಿದಿದ್ದು, ಶನಿವಾರ 58 ಜನರಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿದೆ. ಗುಣಮುಖರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. 73 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಗುಣಮುಖರ ಸಂಖ್ಯೆ 6955 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.
ಕರೊನಾದಿಂದ ಜಿಲ್ಲೆಯಲ್ಲಿ 73 ವರ್ಷದ ವೃದ್ಧ ಮೃತಪಟ್ಟಿದ್ದು, ಮೃತರ ಸಂಖ್ಯೆ 133ಕ್ಕೆ ಏರಿಕೆ ಆಗಿದೆ. ಒಟ್ಟು 85,736 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 77,306 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 710 ಜನರ ವರದಿ ಬರಬೇಕಿದೆ. 632 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 65,175 ಜನರ ಮೇಲೆ ನಿಗಾ ವಹಿಸಲಾಗಿದೆ. 53,661 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 4,426 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ.
ವಿಜಯಪುರ ತಾಲೂಕು ವ್ಯಾಪ್ತಿ 3784, ಬಸವನಬಾಗೇವಾಡಿ 796, ಬಬಲೇಶ್ವರ 71, ಚಡಚಣ 47, ದೇವರಹಿಪ್ಪರಗಿ 70, ಇಂಡಿ 702, ಕೊಲ್ಹಾರ 87, ಮುದ್ದೇಬಿಹಾಳ 813, ನಿಡಗುಂದಿ 72, ಸಿಂದಗಿ 697, ತಾಳಿಕೋಟೆ 260, ತಿಕೋಟಾ 85 ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ 238 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.