221ಕ್ಕೇರಿದ ಸೋಂಕಿತರ ಸಂಖ್ಯೆ

Corona
Published on

ವಿಜಯಪುರ: ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು ಗುರುವಾರ ಮತ್ತೆ ನಾಲ್ವರಿಗೆ ಸೋಂಕು ದೃಢಪಟ್ಟಿದೆ.
2 ವರ್ಷದ ಹೆಣ್ಣು ಮಗು, 7 ವರ್ಷದ ಬಾಲಕ, 13 ವರ್ಷದ ಬಾಲಕಿ ಹಾಗೂ 35 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ರೋಗಿ ಸಂಖ್ಯೆ 5011ರ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿದೆ. ಆ ಮೂಲಕ ಸೋಂಕಿತರ ಸಂಖ್ಯೆ 221ಕ್ಕೆ ಏರಿಕೆಯಾಗಿದೆ.

16 ಜನ ಬಿಡುಗಡೆ

ಒಟ್ಟು 26594 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಆ ಪೈಕಿ 26275 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 26594 ಜನರ ವರದಿ ಬಾಕಿ ಇದೆ. ಗುರುವಾರ 16 ಜನ ಗುಣಮುಖರಾಗಿದ್ದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈವರೆಗೆ 147 ಜನ ಗುಣಮುಖರಾಗಿದ್ದಾರೆ. 6 ಜನ ಮೃತಪಟ್ಟಿದ್ದು 68 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 8659 ಜನ 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 20375 ಜನ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ವಿವಿಧ ಪ್ರದೇಶಗಳಿಂದ ಬಂದ 29187 ಜನರ ಮೇಲೆ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net