ಮತ್ತೆ ಕರೊನಾ ಆಸ್ಫೋಟ

Corona
Published on

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಕರೊನಾ ಮತ್ತೆ ಆಸ್ಫೋಟಗೊಂಡಿದ್ದು, ಒಂದೇ ದಿನ 145 ಜನರಿಗೆ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 9812ಕ್ಕೆ ಏರಿಕೆ ಆಗಿದೆ.

61 ಜನರು ಬಿಡುಗಡೆಗೊಂಡಿದ್ದು, ಈವರೆಗೆ 8768 ಜನ ಗುಣಮುಖರಾಗಿದ್ದಾರೆ. ಒಟ್ಟು 1,07,331 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 96,874 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 645 ಜನರ ವರದಿ ಬರಬೇಕಿದೆ. 879 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,05,617 ಜನರ ಮೇಲೆ ನಿಗಾ ವಹಿಸಲಾಗಿದೆ. 92,427 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 4258 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಶುಕ್ರವಾರ ಮತ್ತೊರ್ವ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 165ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net