

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಕರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. 156 ಜನ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 9441 ಜನರು ಗುಣಮುಖರಾಗಿದ್ದಾರೆ. ಮತ್ತೆ 93 ಜನರಿಗೆ ಸೋಂಕು ದೃಢವಾಗಿದೆ. ಸೋಂಕಿತರ ಸಂಖ್ಯೆ 10,546ಕ್ಕೆ ಏರಿಕೆ ಆಗಿದೆ.
1,16,226 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,,04,476 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,620 ಜನರ ವರದಿ ಬರಬೇಕಿದೆ. 933 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,16,049 ಜನರ ಮೇಲೆ ನಿಗಾ ವಹಿಸಲಾಗಿದೆ. 1,04,540 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 1,896 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಶುಕ್ರವಾರ 75 ವರ್ಷದ ವೃದ್ಧ ಮೃತಪಟ್ಟಿದ್ದು, ಸಾವಿನ ಸಂಖ್ಯೆ 172ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.