ಸೋಂಕಿತರ ಸಂಖ್ಯೆ ಏರಿಕೆ

CORONA
Published on

ವಿಜಯಪುರ: ಜಿಲ್ಲೆಯಲ್ಲಿ ಕರೊನಾದಿಂದ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಿದೆ. ಸೋಮವಾರ 40 ಜನರಿಗೆ ಸೋಂಕು ದೃಢವಾಗಿದ್ದು, ಈ ವರೆಗೆ ಸೋಂಕಿತರ ಸಂಖ್ಯೆ 13,782ಕ್ಕೆ ಏರಿಕೆ ಆಗಿದೆ. 20 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ವರೆಗೆ 13,475 ಜನರು ಗುಣಮುಖರಾಗಿದ್ದಾರೆ. ಒಟ್ಟು 1,85,991 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,70,918 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,291 ಜನರ ವರದಿ ಬರಬೇಕಿದೆ. ಒಟ್ಟು 1,86,561 ಜನರ ಮೇಲೆ ನಿಗಾವಹಿಸಲಾಗಿದ್ದು, 329 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 1,72,557 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. ಸೋಮವಾರ ಮೃತಪಟ್ಟವರ ಕುರಿತು ವರದಿ ಆಗಿಲ್ಲ. ಈ ವರೆಗೆ ಒಟ್ಟು 200 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net