ಕರೊನಾ ನಿರ್ಲಕ್ಷೃ ಸಲ್ಲ

Basavaraj Koulagi
Published on

ವಿಜಯಪುರ: ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಹರಡುತ್ತಿರುವ ಕರೊನಾ ವೈರಸ್ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಅತ್ಯಂತ ಜವಾಬ್ದಾರಿಯಿಂದ ಸರ್ವರೂ ಸಹಕಾರ ಕೊಡುವುದು ಅತ್ಯಂತ ಅವಶ್ಯ. ಯಾವುದೇ ಕಾರಣಕ್ಕೂ ನಿರ್ಲಕ್ಷೃ ಸಲ್ಲ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಎಸ್. ಕೌಲಗಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಅವರು ಮನವಿ ಮಾಡಿದ್ದು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲೂ ಜೀವದ ಹಂಗು ತೊರೆದು ಕರೊನಾ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಅಧಿಕಾರಿಗಳು, ವಿದ್ಯುತ್ ಇಲಾಖೆ, ಪೌರ ಕಾರ್ಮಿಕರು ಜತೆಗೆ ಮಾಧ್ಯಮ ಸಮೂಹದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಕರೊನಾ ವೈರಸ್‌ನ ವಿರಾಟ ಸ್ವರೂಪ ವಿಶ್ವದೆಲ್ಲೆಡೆ ಕಾಣಿಸುತ್ತಿದೆ. ಇಟಲಿ ಸೇರಿದಂತೆ ವಿವಿಧ ದೇಶಗಳು ಆರಂಭದಲ್ಲಿ ಕರೊನಾ ವೈರಸ್‌ನ ದುಷ್ಪರಿಣಾಮವನ್ನು ಗಂಭೀರವಾಗಿ ತೆಗೆದುಕೊಳ್ಳದ್ದರಿಂದ ಇಂದು ಸಂಕಷ್ಟಕ್ಕೀಡಾಗಿದೆ. ಇಂಥ ಪರಿಸ್ಥಿತಿ ನಮ್ಮ ದೇಶಕ್ಕೆ ಬರಬಾರದು ಎಂದರೆ ನಾವೆಲ್ಲರೂ ಈಗಲೇ ಎಚ್ಚೆತ್ತುಕೊಳ್ಳಬೇಕು. ಸರ್ಕಾರದ ಎಲ್ಲ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕರೊನಾವನ್ನು ಹಗುರವಾಗಿ ಪರಿಗಣಿಸದೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ರೋಗ ಉಲ್ಬಣವಾಗದಂತೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net