ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

Court
Published on

ವಿಜಯಪುರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಜಿಲ್ಲಾ ಹಾಗೂ ಸೆಷನ್ಸ್ (ಪೋಕ್ಸೋ ವಿಶೇಷ) ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಚಂದಪ್ಪ ವಡ್ಡರ ಶಿಕ್ಷೆಗೊಳಗಾದ ಅಪರಾಧಿ. 2013ರ ಏ.24ರಂದು ಮಧ್ಯಾಹ್ನ 1.30ಕ್ಕೆ ಬಸವನ ಬಾಗೇವಾಡಿಯ ದಿಂಡವಾರ ಗ್ರಾಮದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಬ.ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸವಿತಾಕುಮಾರಿ ಎಚ್. ಐದು ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಕಲಂ 354 ಐಪಿಸಿ ಪ್ರಕಾರ ಐದು ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಪಿರ್ಯಾದಿ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗುಂಡ ವಾದ ಮಂಡಿಸಿದ್ದರು. ಪೊಲೀಸ್ ಅಧಿಕಾರಿಗಳಾದ ಎಂ.ಎನ್.ಸಿಂಧೂರ ಹಾಗೂ ಎಸ್.ಬಿ.ಗೌಡರ ಪ್ರಕರಣದ ತನಿಖೆ ಕೈಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net