ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ

hn-10-4
Published on

ವಿಜಯಪುರ : ದಲಿತರ ಮೇಲೆ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದಸಂಸ ರಾಜ್ಯ ಸಂಚಾಲಕ ಡಾ.ಡಿ.ಜಿ. ಸಾಗರ ಮಾತನಾಡಿ, ದಲಿತ ಮುಖಂಡ ವೈ.ಸಿ. ಮಯೂರ ಅವರ ಮೇಲೆ ಪೊಲೀಸರು ಅನ್ಯಾಯವಾಗಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಅದೇ ರೀತಿ ಜಿಲ್ಲೆಯ ವಿವಿಧೆಡೆ ದಲಿತ ಹೋರಾಟಗಾರರ ಮೇಲೆ ಪೊಲೀಸರ ದೌರ್ಜನ್ಯ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ ಎಂದು ದೂರಿದರು.

ಅನ್ಯಾಯ, ಅಸಮಾನತೆ, ವ್ಯವಸ್ಥೆಯಲ್ಲಿ ಸ್ವಾಭಿಮಾನಿ ಹಾಗೂ ನ್ಯಾಯಪರ ವ್ಯಕ್ತಿ ಸಂಘಟನೆಗಳು ಹೋರಾಟಕ್ಕಿಳಿಯುವುದು ಅನಿವಾರ್ಯ. ಮುಂದಿನ ದಿನಗಳಲ್ಲಿ ದಲಿತರು ಒಟ್ಟುಗೂಡಿ ಸಮಾಜದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕಿದೆ ಎಂದರು.

ದಸಂಸ ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ಮುಖಂಡರಾದ ರಮೇಶ ಆಸಂಗಿ, ಸಿದ್ದು ರಾಯಣ್ಣವರ, ರಮೇಶ ದರಣಾಕರ, ಅಶೋಕ ಚಲವಾದಿ, ಪ್ರಕಾಶ ಗುಡಿಮನಿ, ಮಂಜು ಯಂಟಮಾನ, ವಿಜಯ ಕಾಂಬಳೆ, ಶರಣು ಸಿಂಧೆ, ಶಿವಾಜಿ ಮೆಟಗಾರ, ದಸ್ತಗಿರ ಮುಲ್ಲಾ, ರಾಜು ತೊರವಿ, ಸೋಮು ಮೇಲಿನಮನಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net