ಡೆಂಘೆ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಜಾಗೃತರಾಗಿ

denge avernece program
Published on

ವಿಜಯವಾಣಿ ಸುದ್ದಿಜಾಲ ವಿಜಯಪುರ
ಡೆಂಘೆ, ಚಿಕೂನ್ ಗುನ್ಯಾ ಹರಡುವ ಈಡೀಸ್ ಸೊಳ್ಳೆಗಳು ಸ್ವಚ್ಛ ನೀರಿನ ಸಂಗ್ರಹಣೆಗಳಲ್ಲಿ ಉತ್ಪತ್ತಿಯಾಗುತ್ತವೆ. ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈ ಸೊಳ್ಳೆಗಳ ನಿಯಂತ್ರಣ ಅತ್ಯವಶ್ಯ. ರೋದದ ನಿಯಂತ್ರಣದ ಕುರಿತು ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧಮೇರ್ಂದ್ರ ಹೇಳಿದರು.
ಪಟ್ಟಣದ ಪುರಸಭೆಯ ಮುಂಭಾಗದಲ್ಲಿ ಆರೋಗ್ಯ ಇಲಾಖೆಯಿಂದ ಡೆಂೆ, ಚಿಕೂನ್ ಗುನ್ಯಾ ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಡೆಂಘೆ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ನೀರಿನ ಸಂಗ್ರಹಣೆಗಳಾದ ಸಿಮೆಂಟ್ ತೊಟ್ಟಿ, ಡ್ರಂಗಳು, ಬ್ಯಾರಲ್ ಹಾಗೂ ಇತರೆ ನೀರಿನ ಸಂಗ್ರಹಣೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಸ್ವಚ್ಛಗೊಳಿಸಿ ಮತ್ತೆ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳ ಅಥವಾ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಿ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟಬೇಕು ಎಂದರು.
ಬಕೇಟ್, ಖಾಲಿ ಡಬ್ಬಗಳು, ಏರ್ ಕೂಲರ್, ಮಡಿಕೆ, ತೆಂಗಿನಚಿಪ್ಪು, ಒಡೆದ ಟೈರ್‌ಗಳು, ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿ, ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ, ಸೊಳ್ಳೆ ನಿರೋಧಕ ಬಳಸಿ, ಕಿಟಕಿಗಳಿಗೆ ಸೊಳ್ಳೆ ನಿರೋಧಕ ಮೆಶ್ ಅಳವಡಿಸಿ ಡೆಂಘೆ, ಚಿಕೂನ್ ಗುನ್ಯಾ ನಿಯಂತ್ರಿಸಬೇಕು. ಯಾವುದೇ ಜ್ವರ ಬರಲಿ, ವೈದ್ಯರನ್ನು ಸಂಪರ್ಕಿಸಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ಕುಮಾರ್ ಮಾತನಾಡಿ, ಸಾರ್ವಜನಿಕರು ರೋಗ ನಿಯಂತ್ರಣ ಮಾಡುವ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಪುರಸಭೆ ಸದಸ್ಯ ಇಕ್ಬಾಲ್, ಮುಖಂಡರಾದ ಗೌಸ್‌ಖಾನ್, ಮೆಹಬೂಬ್ ಪಾಷಾ, ಆರೋಗ್ಯ ಇಲಾಖೆಯ ನಟರಾಜ್, ಉಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net