ನಿರ್ದೇಶನಾನುಸಾರ ಲಾಕ್‌ಡೌನ್ ಸಡಿಲಿಕೆ

VJP 23-1
Published on

ವಿಜಯಪುರ: ಕರೊನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗುರುವಾರ ಮತ್ತೆರೆಡು ಪಾಸಿಟಿವ್ ಪ್ರಕರಣ ಬಂದಿದ್ದು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಜಿಲ್ಲೆಗೆ ಈವರೆಗೆ ವಿದೇಶ ಮತ್ತು ಇತರೆ ಪ್ರದೇಶಗಳಿಂದ ಒಟ್ಟು 1705 ಜನರು ಆಗಮಿಸಿರುವ ಬಗ್ಗೆ ವರದಿಯಾಗಿದ್ದು ಅವರ ಮೇಲೆ ನಿಗಾ ಇರಿಸಲಾಗಿದೆ. ಒಟ್ಟು 1426 ಜನರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, 1245 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 144 ಜನರ ವೈದ್ಯಕೀಯ ವರದಿ ಬರಬೇಕಾಗಿದೆ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 378 ಜನರು 28 ದಿನಗಳ ಅವಧಿಯನ್ನು ಪೂರ್ಣಗೊಳಿಸಿದ್ದು, 1325 ಜನರು 1 ರಿಂದ 28 ದಿನಗಳ ರೀಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಗುರುವಾರ ಕಂಡುಬಂದ ಪಾಸಿಟಿವ್ ಪ್ರಕರಣಗಳಲ್ಲಿ ರೋಗಿ ಸಂಖ್ಯೆ 428 ಈತ 221 ಇವರ ಸಂಪರ್ಕದಿಂದ ಸೋಂಕು ತಗುಲಿದೆ. ಅದರಂತೆ ರೋಗಿ ಸಂಖ್ಯೆ 429 ಮಹಿಳೆಗೆ ಸಂಪರ್ಕ ಪತ್ತೆ ಕಾರ್ಯ ತೀವ್ರಗತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಲಾಕ್‌ಡೌನ್ ಸಡಿಲಿಕೆ ವಿಚಾರ

ಸರ್ಕಾರದ ನಿರ್ದೇಶನಾನುಸಾರ ಲಾಕ್‌ಡೌನ್ ಸಡಿಲಿಕೆಗೊಳಿಸಿಲಾಗುವುದು. ನಗರದ ಕಂಟೇನ್ಮೆಂಟ್, ಕ್ಲಸ್ಟರ್ ಪ್ರದೇಶ ಮತ್ತು ತಿಕೋಟಾ ತಾಲೂಕಿನ ರತ್ನಾಪುರ ಕಂಟೇನ್ಮೆಂಟ್ ಪ್ರದೇಶ ಹೊರತು ಪಡಿಸಿ ಕೃಷಿ ಚಟುವಟಿಕೆ, ಕೃಷಿ ಪರಿಕರ, ರಸಗೊಬ್ಬರ, ಅವಶ್ಯಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಾಮಾಜಿಕ ಅಂತರ ನಿಯಮ ಪಾಲಿಸದೇ ಇದ್ದಲ್ಲಿ ಕಾನೂನಿನ ರೀತ್ಯ ಸೂಕ್ತಕ್ರಮ ಕೈಗೊಳ್ಳಲಾಗುತ್ತದೆ. ಅದರಂತೆ ಸರ್ಕಾರ ಅನುಮತಿಸಿದಂತೆ ಚಟುವಟಿಕೆಯನ್ನು ಕೈಗೊಳ್ಳುವ ಸಂದರ್ಭದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್, ಮಾಸ್ಕ್ ಬಳಸಲು ಸೂಚಿಸಲಾಗಿದೆ. ಗುರುತಿನ ಚೀಟಿಗಳ ದುರುಪಯೋಗವಾಗದಂತೆ ನಿಗಾ ಇಡಲಾಗಿದ್ದು, ತಪ್ಪಿತಸ್ಥರು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ನಿರಾಶ್ರಿತರಿಗೆ ಪುನರ್ವಸತಿ

ವಿಜಯಪುರಕ್ಕೆ ಆಗಮಿಸುವ ನಿರಾಶ್ರಿತರಿಗೆ ತಾತ್ಕಾಲಿಕ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲೆಯಿಂದ ರಾಜ್ಯದ ಇತರೆ ಜಿಲ್ಲೆಗೆ ಹೋಗಬಯಸುವ ಕಾರ್ಮಿಕರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಕಳುಹಿಸಲು ಪ್ರಯತ್ನಿಸಲಾಗುತ್ತಿದ್ದು, ಹೊರರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಶ್ ಅಧೀಕ್ಷಕ ಅನುಪಮ್ ಅಗರವಾಲ್, ಜಿಪಂ ಸಿಇಒ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net