ಆರೋಪಿ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

VJP 18-1
Published on

ವಿಜಯಪುರ: ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ವಿಎಸ್‌ಡಿಇಎಸ್ ವೆಲ್‌ಫೇರ್ ಸೊಸೈಟಿ ನೇತೃತ್ವ ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಮಕ್ಕಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮುದ್ದೇಬಿಹಾಳ ತಾಲೂಕಿನ ನಡಹಳ್ಳಿ ಗ್ರಾಮದ ರುದ್ರಗೌಡ ಬಿರಾದಾರ (52) ಎಂಬಾತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಬಾಲಕಿ ಜೋರಾಗಿ ಕಿರುಚಿದ್ದರಿಂದ ಆರೋಪಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದು, ಆತನಿಗೆ ಕಠಿಣ ಶಿಕ್ಷೆ ವಿಧಿಸಿ ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸೊಸೈಟಿ ಅಧ್ಯಕ್ಷ ಪ್ರಶಾಂತ ದೇಶಪಾಂಡೆ, ಬೆನ್ನು ಹುರಿ ಅಪಘಾತಕ್ಕೊಳಪಟ್ಟವರ ಸಂಘದ ಅಧ್ಯಕ್ಷ ನಿಮಿಷ ಆಚಾರ್ಯ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net