ಮಹಾವೀರ ಜಯಂತಿ ಆಚರಣೆ

HN 6-1
Published on

ವಿಜಯಪುರ: ಭಗವಾನ್ ಮಹಾವೀರರ ಜಯಂತಿಯನ್ನು ಸರಳವಾಗಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.
ಜಿಲ್ಲಾಡಳಿತ ವತಿಯಿಂದ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಗೋವಿಂದ ರೆಡ್ಡಿ, ಎಸ್‌ಪಿ ಅನುಪಮ್ ಅಗರವಾಲ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ನಾಗರಿಕ ಮತ್ತು ಆಹಾರ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಸುರೇಖಾ, ಸಮಾಜದ ಮುಖಂಡರಾದ ಶೀತಲಕುಮಾರ್ ಓಗಿ, ನಿತೀನ್ ರುಣವಾಲ, ಮಹಾವೀರ ಪಾರೇಖ, ಪ್ರವೀಣ ಕಾಸಾರ, ಲಾಲ್‌ಚಂದ್ ಜೈನ್, ಗೌತಮ್ ಜೈನ್, ಸುಕರಾಜ್ ಪೋರವಾಲ್, ಮುಖಂಡ ಅಡಿವೆಪ್ಪ ಸಾಲಗಲ್ ಸೇರಿದಂತೆ ಇನ್ನಿತರ ಗಣ್ಯರು ಮಹಾವೀರರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net