ಎಂಇಎಸ್ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ

VJP 25-3
Published on

ವಿಜಯಪುರ: ಮಹಾರಾಷ್ಟ್ರದ ಮುಖ್ಯ ಮಂತ್ರಿಯ ಉದ್ಧಟತನದ ಹೇಳಿಕೆ ಖಂಡಿಸಿ ಕನ್ನಡ ಸೇನೆಯಿಂದ ಸೋಮವಾರ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ದೇವೇಂದ್ರ ಎಸ್. ಮಿರೇಕಠ ಮಾತನಾಡಿ, ಎಂಇಎಸ್ ಕಾಯಕರ್ತರು ಅಂದರೆ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಮುಖಂಡರು ಸೇರಿ ಬೆಳಗಾವಿ ಮಹಾನಗರ ಪಾಲಿಕೆ ಎದುರುಗಡೆ ಇರುವ ಕನ್ನಡ ಧ್ವಜವನ್ನು ಕಿತ್ತು ಹಾಕುವ ಯತ್ನದಲ್ಲಿದ್ದಾರೆ. ಕಾರಣ ಸದರಿ ಕನ್ನಡ ಧ್ವಜಕ್ಕೆ ಧಕ್ಕೆಯಾಗದಂತೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿ ನೋಡಿಕೊಳ್ಳಬೇಕೆಂದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ರಾಕ್ರೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವುದಾಗಿ ವ್ಯರ್ಥ ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲ, ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ಇದಕ್ಕೆ ಎಂಇಎಸ್ ಸಹ ಕುಮ್ಮಕ್ಕು ನೀಡುತ್ತಿದ್ದು ಕೂಡಲೇ ಎಂಇಎಸ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮುಖಂಡರಾದ ರವಿ ಕುಟನೂರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ರವಿ ಪೂಜಾರಿ, ಅರವಿಂದ ಗುನ್ನಾಪುರ, ರಿಯಾಜ ಲಾಹೂರಿ, ಮಹಾದೇವಗೌಡ ಬಿರಾದಾರ, ಐ.ಎಸ್. ಬುರಣಾಪುರ, ಅಭಿಷೇಕ ಚಕ್ರವರ್ತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net