ಉದ್ಯೋಗಮೇಳದತ್ತ ನಿರುದ್ಯೋಗಿಗಳ ಚಿತ್ತ

HN 24-1
Published on

ವಿಜಯಪುರ: ನಗರದ ಐಟಿಐ ಕಾಲೇಜು ಆವರಣದಲ್ಲಿ ೆ.28 ಹಾಗೂ 29 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದ್ದು, ಸುಮಾರು 6500ಕ್ಕೂ ಅಧಿಕ ನಿರುದ್ಯೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 70ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.
ಉದ್ಯೋಗ ಮೇಳ ಹಮ್ಮಿಕೊಳ್ಳುವ ಕುರಿತು ಸೋಮವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ೆ.27ರ ಸಂಜೆವರೆಗೆ ಅವಕಾಶ ಇದೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳು ೆ. 28 ರಂದು ಸಂದರ್ಶನದಲ್ಲಿ ಭಾಗಿಯಾಗಬಹುದು ಎಂದು ಹೇಳಿದರು.
ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ೆ. 28 ರಂದು ನೇರವಾಗಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಫೆ.29 ರಂದು ಸಂದರ್ಶನಕ್ಕೆ ಹಾಜರಾಗಬಹುದು ಎಂದು ತಿಳಿಸಿದರು. ಸಂದರ್ಶನದಲ್ಲಿ ಭಾಗಿಯಾಗುವ ಅಭ್ಯರ್ಥಿಗಳು ಹಾಗೂ ಕಂಪನಿಗಳ ಪ್ರತಿನಿಧಿಗಳಿಗೆ ತೊಂದರೆಯಾಗದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳಿಗೆ ಸ್ಟಾಲ್‌ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಸಂದರ್ಶನದ ಬಗ್ಗೆ ಮಾಹಿತಿ ನೀಡಲಾಗುವುದು. ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟ-ಉಪಾಹಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಜಿಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ರಮೇಶ ದೇಸಾಯಿ ಇತರರು ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net