ಮತ್ತೆ ನಾಲ್ವರು ಸೋಂಕಿತರು ಗುಣಮುಖ

Covid 19
Published on

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣಕ್ಕಿಂತ ಗುಣಮುಖರಾಗುತ್ತಿರುವರ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ ಜನತೆಗೆ ಇನ್ನಷ್ಟು ವಿಶ್ವಾಸ ಹೆಚ್ಚಿಸಿದೆ.
ಇಲ್ಲಿನ ಜಿಲ್ಲಾಸ್ಪತ್ರೆಯಿಂದ ಸೋಮವಾರ ಕರೊನಾ ಸೋಂಕಿತರು ಮತ್ತೆ ನಾಲ್ವರು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 19 ಜನರು ಗುಣಮುಖರಾಗಿದ್ದಾರೆ.

ಪಿ. 400 (ಮಹಿಳೆ, 25 ವರ್ಷ) ಪಿ.403 (ಮಹಿಳೆ, 47 ವರ್ಷ) ಪಿ. 404 (ಹುಡುಗ, 10 ವರ್ಷ) 405 (ಮಹಿಳೆ, 34 ವರ್ಷ) ು ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗಿನ ಒಟ್ಟು 47 ಪಾಸಿಟಿವ್ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನುಳಿದ 26 ಕೋವಿಡ್-19 ಪಾಸಿಟಿವ್ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಪರಿಣಾಮಕಾರಿ ಚಿಕಿತ್ಸೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆ ಸರ್ಜನ್ ಶರಣಪ್ಪ ಕಟ್ಟಿ, ಡಾ.ಲಕ್ಕಣ್ಣವರ, ಡಾ.ಎಂ.ಬಿ.ಬಿರಾದಾರ, ಡಾ.ಇಂಗಳೆ, ಡಾ.ಗುಂಡಪ್ಪ, ರವಿ ಕಿತ್ತೂರ, ಅಜಿತ್ ಕೋಟ್ನಿಸ್, ಡಾ.ಶೈಲಾಶ್ರೀ. ಬಸವರಾಜ ಕಟ್ಟಿಮನಿ, ನಸೀಮಾಬಾನು ಮುಜಾವರ ಉಪಸ್ಥಿತರಿದ್ದರು.

ಮತ್ತೊಂದು ಪಾಸಿಟಿವ್

ಜಿಲ್ಲೆಯಲ್ಲಿ ಮತ್ತೊಂದು ಕರೊನಾ ಸೋಂಕು ದೃಢಪಟ್ಟಿದೆ. 62 ವರ್ಷದ ಮಹಿಳೆಗೆ ಕರೊನಾ ಸೋಂಕು ಇರುವುದು ಪರೀಕ್ಷೆಯಿಂದ ತಿಳಿದುಬಂದಿದೆ. 12 ವರ್ಷದ ಹುಡುಗ ಪಿ.228ರ ಸಂಪರ್ಕ ಹೊಂದಿದ್ದ ಮಹಿಳೆಗೆ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net