ಕೃಷಿ ವಿಜ್ಞಾನ ಕೇಂದ್ರಕ್ಕೆ ಮಾಜಿ ಶಾಸಕ ಭೇಟಿ

VMS 18-3
Published on

ವಿಜಯಪುರ: ನಗರದ ಹೊರವಲಯದ ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಜಮಖಂಡಿ ಮತಕ್ಷೇತ್ರದ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಭೇಟಿ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಸ್. ಎ. ಬಿರಾದಾರ ಸ್ವಾಗತಿಸಿ, ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರೈತರಿಗಾಗಿ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಯನ್ನು ವಿವರಿಸಿದರು.
ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಡಿಮೆ ವೆಚ್ಚದಲ್ಲಿ ಅಳವಡಿಸಲಾದ ಸ್ಯಾನಿಟೈಸರ್ ಕೈ ಸ್ವಚ್ಛ ಮಾಡಿಕೊಳ್ಳುವ ಯಂತ್ರಕ್ಕೆ ಚಾಲನೆ ನೀಡಿದರು. ಸಹ ವಿಸ್ತರಣಾ ನಿರ್ದೇಶಕ ಡಾ.ಆರ್.ಬಿ. ಬೆಳ್ಳಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಪ್ರೇಮಾ ಪಾಟೀಲ, ಡಾ.ಸಂಗೀತಾ ಜಾಧವ, ಡಾ.ಶಿವಲಿಂಗಪ್ಪ ಹೋಟಕರ, ಬಿ.ಸಿ. ಕೋಲ್ಹಾರ, ವಿವೇಕ ದೇವರನಾವದಗಿ, ಶ್ರೀಶೈಲ ರಾಠೋಡ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net