ಗುಣಮುಖರ ಸಂಖ್ಯೆ ಹೆಚ್ಚಳ

Corona
Published on

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಗುಣಮುಖರ ಸಂಖ್ಯೆ ಹೆಚ್ಚಳಗೊಂಡಿದೆ. 41 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ 11,676 ಜನರು ಕರೊನಾದಿಂದ ಗುಣಮುಖರಾಗಿದ್ದಾರೆ. 37 ಜನರಿಗೆ ಕರೊನಾ ಸೋಂಕು ದೃಢವಾಗಿದ್ದು, ಈ ವರೆಗೆ ಸೋಂಕಿತರ ಸಂಖ್ಯೆ 12,309ಕ್ಕೆ ಏರಿಕೆ ಆಗಿದೆ.

ಒಟ್ಟು 1,37,517 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,24,069 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,139 ಜನರ ವರದಿ ಬರಬೇಕಿದೆ. 441 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,38,901 ಜನರ ಮೇಲೆ ನಿಗಾ ವಹಿಸಲಾಗಿದೆ. 1,25,645 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 1,388 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಬುಧವಾರ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಈ ವರೆಗೆ ಮೃತರ ಸಂಖ್ಯೆ 192ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net