ಗುಣಮುಖರ ಸಂಖ್ಯೆ ಹೆಚ್ಚಳ

Corona
Published on

ವಿಜಯಪುರ : ಜಿಲ್ಲೆಯಲ್ಲಿ ಮಂಗಳವಾರ ಗುಣಮುಖರ ಸಂಖ್ಯೆ ಹೆಚ್ಚಳವಾಗಿದೆ. 133 ಜನರು ಗುಣಮುಖರಾಗಿದ್ದು, ಈ ವರೆಗೆ 10,039 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 87 ಜನರಲ್ಲಿ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,021ಕ್ಕೆ ಏರಿಕೆ ಆಗಿದೆ.
ಒಟ್ಟು 1,21,605 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,07,737 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 2,847 ಜನರ ವರದಿ ಬರಬೇಕಿದೆ. 806 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,21,831 ಜನರ ಮೇಲೆ ನಿಗಾ ವಹಿಸಲಾಗಿದೆ. 1,09,802 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 1,814 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಮಂಗಳವಾರ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 176ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net