ರಸ್ತೆಗಳಲೆಲ್ಲ ಸ್ಮಶಾನ ಮೌನ

hn 29-2
Published on

ವಿಜಯಪುರ: ಜಿಲ್ಲಾದ್ಯಂತ ಜನತಾ ಕರ್ಫ್ಯೂಗೆ ಗುರುವಾರ ಎರಡನೇ ದಿನವೂ ವ್ಯಾಪಕ ಸ್ಪಂದನೆ ದೊರಕಿದ್ದು, ಶುಕ್ರವಾರ 3ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಹಳ್ಳಿ-ಹಳ್ಳಿಗಳಲ್ಲಿ, ನಗರ, ಪಟ್ಟಣಗಳಲ್ಲಿರುವ ರಸ್ತೆಗಳಲ್ಲಿ ಸ್ಮಶಾನ ಮೌನ ಆವರಿಸಿದೆ.

ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡುವ ರಸ್ತೆಗಳಲ್ಲಿ ಇದೀಗ ಬಿಕೋ ಎನ್ನುವ ವಾತಾವರಣ ಸೃಷ್ಟಿಗೊಂಡಿದೆ. ವಿಜಯಪುರ ನಗರದ ಬಡಾವಣೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಸಂಪೂರ್ಣವಾಗಿ ಸಂಚಾರ ವ್ಯವಸ್ಥೆಯನ್ನು ಬಂದ್ ಮಾಡಲಾಗಿದೆ. ಬೆಳಗ್ಗೆ 10 ಗಂಟೆವರೆಗಷ್ಟೆ ದಿನಸಿ ಪದಾರ್ಥ, ತರಕಾರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಕೆಲವು ಕಡೆಗಳಲ್ಲಿ ಕಾಯಿಪಲ್ಲೆ ಮಾರಾಟ ಮಾಡುವ ಸ್ಥಳಗಳಲ್ಲಿ ಜನರು ಪರಸ್ಪರ ಅಂತರ ಕಾಯ್ದುಕೊಳ್ಳದಿರುವ ದೃಶ್ಯಗಳು ಕಂಡು ಬಂದವು.

57 ವಾಹನಗಳ ಜಪ್ತಿ
ವಿಜಯಪುರ ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಲ್ಲದೆ 57 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಮಾಸ್ಕ್ ಧರಿಸದಿರುವ 146 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆಯಡಿ 8 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net