ವಿಜಯಪುರ ಬಾಲಕಿಯರ ಕೊಲೆ ಪ್ರಕರಣ ಸಿಒಡಿಗೆ ಒಪ್ಪಿಸಲು ಒತ್ತಾಯ

Safai Karmachari Development Corporation President Hanumanthappa
ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ.
Published on

ಬಳ್ಳಾರಿ: ವಿಜಯಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತ ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಒಡಿಗೆ ಒಪ್ಪಿಸುವ ಮೂಲಕ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದವರಿಗೆ ನ್ಯಾಯಕೊಡಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿರುವ ಅವರು, ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇವೆ. ಇದಕ್ಕೆ ನಿದರ್ಶನವೆಂಬಂತೆ ವಿಜಯಪುರ ಜಿಲ್ಲೆಯಲ್ಲಿ ದಲಿತ ಸಮುದಾಯದ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಅಲ್ಲದೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆತ್ಮಹತ್ಯೆ ಎಂದು ತಿರುಚಲಾಗಿದೆ ಎಂದು ದಲಿತ ಸಮುದಾಯ ಆಕ್ರೋಶಕ್ಕೆ ಕಾರಣವಾಗಿದೆ.

ಆರೋಪಿಗಳು ರಾಜಕೀಯ ಪ್ರಭಾವಿಗಳಾಗಿದ್ದು, ಪ್ರಕರಣದ ದಿಕ್ಕುತಪ್ಪಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣವನ್ನು ಸಿಒಡಿಗೆ ಒಪ್ಪಿಸಬೇಕು. ಪಾರದರ್ಶಕ ತನಿಖೆ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ಎಚ್.ಹನುಮಂತಪ್ಪ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net