

ವಿಜಯಪುರ: ಕರೊನಾ ವೈರಸ್ ಹರಡದಂತೆ ತಡೆಯಲು ಕರ್ನಾಟಕ ಲಾಕ್ಡೌನ್ ಮಾಡಿರುವ ಹಿನ್ನೆಲೆಯಲ್ಲಿ ವಿಜಯಪುರ-ಕಲಬುರಗಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಸೇತುವೆಯ ಮುಂಭಾಗದಲ್ಲಿ ಮಣ್ಣಿನ ಗುಡ್ಡೆ ಹಾಗೂ ಮುಳ್ಳಿನ ರಾಶಿ ಹಚ್ಚಿ ರಸ್ತೆಯನ್ನು ಮುಚ್ಚಲಾಗಿದೆ. ವಿಜಯಪುರ ಜಿಲ್ಲೆ ಹಾಗೂ ಕಲಬುರಗಿ ಜಿಲ್ಲೆಯ ಗಡಿ ಭಾಗದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸೇತುವೆಯು ವಿಜಯಪುರದ ಇಂಡಿ ತಾಲ್ಲೂಕಿನ ಚಿಕ್ಕ ಮಣ್ಣೂರ್ ಹಾಗೂ ಕಲಬುರಗಿಯ ಅಫಜಲ್ಪುರ ತಾಲ್ಲೂಕಿನ ಹಿರೆಮಣ್ಣೂರ ಮಧ್ಯೆ ಇದೆ. ಗ್ರಾಮ ಪಂಚಾಯಿತಿ ವತಿಯಿಂದ ಅಧಿಕಾರಿಗಳು ಜೆಸಿಬಿ ಮೂಲಕ ರಸ್ತೆಯನ್ನು ಬಂದ್ ಮಾಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಜನರು ಕಲಬುರಗಿಗೆ ತೆರಳದಂತೆ ಹಾಗೂ ಕಲಬುರಗಿ ಜಿಲ್ಲೆಯ ಜನರು ವಿಜಯಪುರ ಜಿಲ್ಲೆಗೆ ಆಗಮಿಸದಂತೆ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.