ರಸ್ತೆ ಅಪಘಾತದಲ್ಲಿ ಅಪ್ಪ-ಮಗಳು ಸಾವು

Death
Published on

ವಿಜಯಪುರ: ಕೊಲ್ಹಾರ ತಾಲೂಕಿನ ಮಟ್ಟಿಹಾಳ ಕ್ರಾಸ್‌ನಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಅಪ್ಪ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದ ಧರೆಪ್ಪ ಶಿವಣ್ಣವರ ಹಾಗೂ ಆತನ ಪುತ್ರಿ ಮೂರು ವರ್ಷದ ಮಗಳು ಸಾನ್ವಿ ಮೃತಪಟ್ಟ ದುರ್ದೈವಿಗಳು. ಇವರು ತೆಲಗಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು. ಕಾರು ಚಾಲಕನೂ ಗಾಯಗೊಂಡಿದ್ದು, ಆತನನ್ನು ಕೊಲ್ಹಾರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net