ಜನವಿರೋಧಿ ಸರ್ಕಾರ ಕಿತ್ತೊಗೆಯಿರಿ

hn 7-1
Published on

ವಿಜಯಪುರ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಒತ್ತಾಯಿಸಿದರು.

ಬಬಲೇಶ್ವರ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಬುಧವಾರ ನಡೆದ ಸೈಕಲ್ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಅಡುಗೆ ಅನಿಲದ ಬೆಲೆ, ಅಡುಗೆ ಎಣ್ಣೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವ ಈ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ. ಇಂಥ ಜನ ವಿರೋಧಿ ಸರ್ಕಾರ ಸಂವೇದನೆಯನ್ನೇ ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಸ್. ಪಾಟೀಲ, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರನಗೌಡ ಬಿರಾದಾರ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಮಲ್ಲಿಕಾರ್ಜುನ ಮರ್ಯಾಣಿ, ಪರಸು ಪಡಗಾರ, ಹನಮಂತ ಬಡಚಿ, ಪ್ರವೀಣ ಪಾಟೀಲ, ಕಾಂಗ್ರೆಸ್ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net