ಶಾಲೆ ಶಿಕ್ಷಕರಿಗೆ, ಸಿಬ್ಬಂದಿಗೆ ಪರಿಹಾರ ನೀಡಲಿ

Arun Shapura
Published on

ವಿಜಯಪುರ: ಲಾಕ್‌ಡೌನ್ ಹಾಗೂ ಕರೊನಾ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ, ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ, ಸಿಬ್ಬಂದಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.

ಕರೊನಾ ಮೊದಲನೇ ಅಲೆ ಹಾಗೂ ಎರಡನೇ ಅಲೆಯಿಂದ ಕ್ಷೌರಿಕರು, ಕೃಷಿಕರು, ಶ್ರಮಿಕರು, ಆಟೋ ಟ್ಯಾಕ್ಸಿ ಚಾಲಕರು, ಕಾರ್ಮಿಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಅದೇ ರೀತಿಯಲ್ಲಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಸೂಕ್ತ ವೇತನ ಸಿಗದೆ ಜೀವನ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಹಾಗಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕಿದೆ. ಕಳೆದ ಬಾರಿಯೂ ಅವರಿಗೆ ಯಾವುದೇ ಪರಿಹಾರ ನೀಡಲಿಲ್ಲ. ಈ ಬಾರಿಯಾದರೂ ಅವರಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ವಿಶ್ವಾಸವಿದೆ. ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಶಿಕ್ಷಣ ಸಚಿವ ಸುರೇಶಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net