ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

VJP 5-1
Published on

ವಿಜಯಪುರ: ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿ ಹಲ್ಲೆ ಮಾಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಬಳಿಕ ಜಿಲ್ಲಾಡಳಿತ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ ಮಾತನಾಡಿ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಸಂತರ ಹತ್ಯೆ, ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿ ಎತ್ತಿದ್ದರು. ಅಂಥ ರಾಷ್ಟ್ರವಾದಿಯ ಜತೆಗೆ ಮಹಾರಾಷ್ಟ್ರ ಸರ್ಕಾರ ಅಸಭ್ಯವಾಗಿ ವರ್ತಿಸಿರುವುದು ಖಂಡನೀಯ ಎಂದರು.

ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಾಪುಸಿಂಗ ರಜಪೂತ, ನಗರ ಯುವ ಮೋರ್ಚಾ ಅಧ್ಯಕ್ಷ ಸತೀಶ ಪಾಟೀಲ, ಅನೀಲ ಉಪ್ಪಾರ, ಆನಂದ ಮುಚ್ಚಂಡಿ, ಭರತ ಕೋಳಿ, ಸತೀಶ ಪೀರನಾಯಕ, ಗಣೇಶ ಹಜೇರಿ, ಪ್ರಶಾಂತ ಅಗಸರ, ಕಿರಣ ನಾಯಕ, ಪ್ರೇಮ ಬಿರಾದಾರ, ಕಿರಣ ರಾಠೋಡ, ರವಿ ಚವಾಣ್, ಪ್ರವೀಣ ಕೂಡಗಿ, ವಿಜಯಕುಮಾರ, ಶಿವರಾಜ ಮಡಿವಾಳರ, ಕಿರಣ ನಾಯಕ, ಸಂತೋಷ ಶಿರಶ್ಯಾಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net