ವೈದ್ಯರ ಕೊರತೆ ನೀಗಿಸಲು ಶೀಘ್ರ ಕ್ರಮ

hn-10-5
Published on

ವಿಜಯಪುರ: ಜಿಲ್ಲಾಸ್ಪತ್ರೆ ಸೇರಿ ವಿವಿಧ ತಾಲೂಕು ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಹಾಗೂ ತಂತ್ರಜ್ಞರ ಕೊರತೆ ಇರುವುದು ನಿಜ. ನನ್ನ ಗಮನಕ್ಕೂ ಬಂದಿದ್ದು, ಶೀಘ್ರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಜಿಲ್ಲೆಯ ಚಡಚಣ ಪ್ರವಾಸಿ ಮಂದಿರದಲ್ಲಿ ಸೋಮವಾರ ಕೋವಿಡ್ ನಿಯಂತ್ರಿಸುವ ಕ್ರಮಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಆಸ್ಪತ್ರೆಗಳಲ್ಲಿನ ಸಮಸ್ಯೆಗಳು ನನ್ನ ಗಮನಕ್ಕೂ ಬಂದಿವೆ. ಆದಷ್ಟು ಬೇಗ ಈ ಸಮಸ್ಯೆಗಳಿಗೆ ಮುಕ್ತಿ ನೀಡಲಾಗುವುದು. ತಾಲೂಕಿನ ಜನರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಇನ್ನಷ್ಟು ವೇಗ ನೀಡಬೇಕಾಗಿದೆ. ಅಲ್ಲದೆ, ಸರ್ಕಾರದ ನಿಯಮಗಳನ್ನು ಕೂಡ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು. ಮಾಸ್ಕ್ ಧರಿಸದೆ ಸುಮ್ಮನೆ ತಿರುಗಾಡುವವರಿಗೆ ದಂಡ ಹಾಕಬೇಕು. ಬೈಕ್ ವಶಪಡಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಶಾಸಕ ದೇವಾನಂದ ಚವಾಣ್, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಂದ್ರ ಕಾಪ್ಸೆ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net