ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

vjp-1-4
Published on

ವಿಜಯಪುರ: ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಲು ಶಾಸಕ ಡಾ.ದೇವಾನಂದ ಚವ್ಹಾಣ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಸಾರ್ವಜನಿಕರಿಗೆ ಲಭ್ಯವಾಗುವಂತಾಗಬೇಕೆಂದರು.

ನಾಗಠಾಣ ವಿಧಾನಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾಗಿದೆ. ಚಡಚಣ ಸೇರಿದಂತೆ ವಿವಿಧ ಭಾಗದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ತಾಂತ್ರಿಕ ತೊಂದರೆಗಳಿಂದ ಕೆಲವೊಂದು ಕಾಮಗಾರಿಗಳು ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ತೊಂದರೆ ನಿವಾರಣೆ ಮಾಡಿ ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಕುಮಾರ ತೊರವಿ, ಪರಸುರಾಮ ಚವ್ಹಾಣ್, ಸಹಾಯಕ ಇಂಜಿನಿಯರ್‌ಗಳಾದ ಪ್ರಶಾಂತ ಹೆಬ್ಬಾರ, ವಿಷ್ಣು ಪೋಳ, ಆನಂದಕುಮಾರ ಮ್ಯಾಗೇರಿ, ಫಾರುಕ್ ಅಲಿಯಾಬಾದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net