ಶಾಸಕ ದೇವಾನಂದ ಭ್ರಮೆಯಲ್ಲಿದ್ದಾರೆ !

Govind karjol,
Published on

ವಿಜಯಪುರ: ತಮಗೆ ಜೀವ ಬೆದರಿಕೆಯಿದೆ ಎಂದು ಹೇಳುತ್ತಿರುವ ನಾಗಠಾಣ ಶಾಸಕ ದೇವಾನಂದ ಚವಾಣ್ ಭ್ರಮೆಯಲ್ಲಿದ್ದಾರೆಂದು ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

ಶಾಸಕ ದೇವಾನಂದ ಸುಳ್ಳು ಹೇಳುತ್ತಿದ್ದಾರೆ. ಜನರಿಂದ ದೂರವಾಗಿರುವ ದೇವಾನಂದ ಬಗ್ಗೆ ನನಗೆ ಚೆನ್ನಾಗಿ ಗೊತ್ತು. 27 ವರ್ಷಗಳಿಂದ ಅವರನ್ನು ನೋಡಿಕೊಂಡು ಬರುತ್ತಿದ್ದೇನೆಂದು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ನಗರದ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾನಂದ ಚವಾಣ್‌ಗೆ ಜೀವ ಬೆದರಿಕೆ ಇರುವುದಾದರೂ ಯಾರಿಂದ? ಅವರು ಭ್ರಮೆಯಲ್ಲಿದ್ದಾರೆ ಎಂದರಲ್ಲದೆ, ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಹಣ ನೀಡುತ್ತಿಲ್ಲ ಎಂಬ ಆರೋಪವನ್ನೂ ತಿರಸ್ಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net